ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಸವಾರ ಸಾವು

IMG-20241102-WA0012
Published on

ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕುವಿನಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರವೊಂದು ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಸೀತಾರಾಮ (58) ಮೃತ ವ್ಯಕ್ತಿಯಾಗಿದ್ದಾರೆ. ಕಡಬದಿಂದ ಮನೆಗೆ ಬರುತ್ತಿರುವಾಗ ಧೂಪದ ಮರ ಏಕಾಏಕಿ ಬಿದ್ದಿದೆ.

ಅರಣ್ಯ ಇಲಾಖೆಯ ಅಸಡ್ಡೆ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಕಡಬ ಪೊಲೀಸರ ಆಗಮಿಸಿ ಪರಿಶೀಲಿಸಿದ್ದಾರೆ. ಹಬ್ಬದ ಆಚರಣೆಯನ್ನು ಸಂಭ್ರಮಿಸುವ ನಿಟ್ಟಿನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಘಟನೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net