

ಮೂಡುಬಿದಿರೆ: ಬನ್ನಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಸೋಮವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ, ಗೂಡಂಗಡಿ ವ್ಯಾಪಾರಿ ಅಬ್ದುಲ್ ಘನಿ ಮೃತಪಟ್ಟಿದ್ದಾರೆ.
ಇನ್ನೊಂದು ದ್ವಿಚಕ್ರ ವಾಹನದಲ್ಲಿದ್ದ ಸಂದೀಪ್ ನಾಯಕ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಅವರ ದೊಡ್ಡಮ್ಮ ಬೇಬಿ ನಾಯ್ಕ ಅವರಿಗೆ ಗಂಭೀರ ಗಾಯವಾಗಿದೆ. ತಿಂಗಳ ಹಿಂದೆ ಇದೇ ಪರಿಸರದಲ್ಲಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದನು.