ಅಪಘಾತಕ್ಕೆ ಸ್ಕೂಟರ್ ಸವಾರ ಬಲಿ

New Project (35)
Published on

ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ನಡುಪದವು ಸಮೀಪ ಶುಕ್ರವಾರ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ ರಝ್ವಿ(22) ಎಂಬುವರು ಮೃತಪಟ್ಟಿದ್ದಾರೆ.

ಕಾಸರಗೋಡಿನ ಅರೇಬಿಕ್ ಶರೀಅತ್ ಕಾಲೇಜೊಂದರಲ್ಲಿ ಅಂತಿಮ ವರ್ಷದ ಧಾರ್ಮಿಕ ಶಿಕ್ಷಣ ಕಲಿಯುತ್ತಿದ್ದರು. ಶುಕ್ರವಾರ ಬೆಳಗ್ಗೆ ಸ್ಕೂಟರ್‌ನಲ್ಲಿ ದೇರಳಕಟ್ಟೆ ಕಡೆಯಿಂದ ಮನೆಯತ್ತ ತೆರಳುತ್ತಿದ್ದರು. ನಡುಪದವು ಸಮೀಪ ತಲುಪಿದಾಗ ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ತೆರಳುತ್ತಿದ್ದ ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿ ನಡೆದಿದೆ.

ಅಪಘಾತದ ತೀವ್ರತೆಗೆ ಸ್ಕೂಟರ್ ಟೆಂಪೋದೊಳಗೆ ನುಗ್ಗಿ ನಜ್ಜುಗುಜ್ಜಾಗಿದೆ. ಸವಾರ ಅಬೂಬಕ್ಕರ್ ಸಿದ್ದೀಕ್, ಟೆಂಪೋ ಮೇಲೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಟೆಂಪೋ ಚಾಲಕನಿಗೂ ಗಾಯವಾಗಿದ್ದು, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net