ಹೆದ್ದಾರಿಯಲ್ಲಿ ಅಪಘಾತ

accident
Published on

ಬೆಂಗಳೂರು ಗ್ರಾಮಾಂತರ: ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿ ರಾಮೇಶ್ವರ ಗೇಟ್ ಬಳಿ ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದು ಲಾರಿಯೊಂದಕ್ಕೆ ಅಪ್ಪಳಿಸಿದ ಹಿನ್ನೆಲೆಯಲ್ಲಿ, ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲುಮಾಡಲಾಗಿದೆ.

ದೊಡ್ಡಬಳ್ಳಾಪುರದಿಂದ ದಾಬಸ್‌ಪೇಟೆ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಲಭಾಗದ ಡಿವೈಡರ್ ದಾಟಿ ದಾಬಸ್‌ಪೇಟಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬೆಳವಂಗಲ ಠಾಣಾ ಪೊಲೀಸರು ಸ್ಥಳ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net