ಅಪಘಾತಕ್ಕೆ ನಿವೃತ್ತ ಶಿಕ್ಷಕ ಬಲಿ

PTR_6 MAR_5
Published on

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ದ್ವಿಚಕ್ರ ವಾಹನ ಸವಾರ, ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ, ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟಿದ್ದಾರೆ. ಪಿಕಪ್ ವಾಹನ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು, ತಲೆಗೆ ತೀವ್ರ ಗಾಯವಾದ ಹಿನ್ನೆಲೆಯಲ್ಲಿ ಮಂಗಳೂರಿಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರು ತಾಯಿ, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net