ಟ್ಯಾಂಕರ್ ಪಲ್ಟಿಯಾಗಿ ಚಾಲಕನಿಗೆ ಗಾಯ

WhatsApp Image 2025-05-21 at 17.27.47_706cea44
Published on

ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆzರಿ ೭೫ರ ಶಿರಾಡಿ ಘಾಟಿ ಸಮೀಪದ ಕೊಡ್ಯಕಲ ಎಂಬಲ್ಲಿ ಬುಧವಾರ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಉತ್ತರ ಪ್ರದೇಶ ಮೂಲದ ರಾಕೇಶ್ ಜಾಧವ್(೪೩) ಗಂಭೀರ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್, ಕೊಡ್ಯಕಲ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಹೊರಠಾಣಾ ಪೊಲೀಸರು ಭೇಟಿ ನೀಡಿ ಸಂಚಾರ ದಟ್ಟಣೆ ನಿಯಂತ್ರಿಸಿದ್ದಾರೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆ ಸಂಭವಿಸಿಲ್ಲ. ಟ್ಯಾಂಕರ್ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಹೆzರಿಯ ಒಂದು ಬದಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net