ಮೈಸೂರಿನಲ್ಲಿ ರಸ್ತೆ ಅಪಘಾತ, ಪೌರ ಕಾರ್ಮಿಕ ಸ್ಥಿತಿ ಗಂಭೀರ

Accident (16)
Published on

ಮೈಸೂರು: ನಗರದ ಡಿ.ದೇವರಾಜ ಅರಸ್ ರಸ್ತೆಯಲ್ಲಿ ಭಾನುವಾರ ಪೌರ ಕಾರ್ಮಿಕರೊಬ್ಬರು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಸಂದರ್ಭ ಕಾರೊಂದು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಶೋಕಪುರಂ ಅಂಬೇಡ್ಕರ್ ಕಾಲನಿ ನಿವಾಸಿಯಾಗಿರುವ ಪೌರ ಕಾರ್ಮಿಕ ಮಹದೇವ(36) ಗಾಯಗೊಂಡವರು. ಇವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ವಕೀಲ ಮಂಜುನಾಥ್ ಎಂಬವರಿಗೆ ಸೇರಿದ ಕಾರು ಡಿಕ್ಕಿ ಹೊಡೆದಿದ್ದು, ಮಂಜುನಾಥ್ ಅವರಿಗೆ ಪೆಟ್ಟಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net