ರಸ್ತೆ ಅಪಘಾತದಲ್ಲಿ ಯುವಕ ಸಾವು

Oplus_0
Oplus_0
Published on

ಯಳಂದೂರು: ತಾಲೂಕಿನ ಮದ್ದೂರು ಗ್ರಾಮದ ಎಳೆಪಿಳ್ಳಾರಿ ಗ್ರಾಮದ ವಿನಾಯಕ ದೇಗುಲದ ತಿರುವಿನಲ್ಲಿ ಸೋಮವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಕೊಳ್ಳೇಗಾಲ ಮೋಳೆ ಗ್ರಾಮದ ಲೇ.ನಾಗರಾಜು ಎಂಬುವರ ಪುತ್ರ ಧನುಷ್(25) ಮೃತರು. ಈತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಸರಕು ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈತ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಶವವನ್ನು ಚಾಮರಾಜನಗರದ ಸಿಮ್ಸ್‌ಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net