

ಯಳಂದೂರು: ತಾಲೂಕಿನ ಕಂದಹಳ್ಳಿ ಗ್ರಾಮದಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಾದಚಾರಿ ಮೃತಪಟ್ಟಿದ್ದಾರೆ.
ಚಂಗಚಹಳ್ಳಿ ಗ್ರಾಮದ ರಂಗಸ್ವಾಮಿ ನಾಯಕ್ (55) ಮೃತರು. ರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಇದೇ ಗ್ರಾಮದ ವ್ಯಕ್ತಿಯೊಬ್ಬ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದ. ಕೂಡಲೇ ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಬೈಕ್ ಸವಾರ ಶಂಕರ್ ಎಂಬುವವರಿಗೂ ತೀತ್ರ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ವಹಿಸಿದ್ದಾರೆ.