ಸರಣಿ ಅಪಘಾತ, ಮೂರು ವಾಹನ ಜಖಂ

pdb-jul17-4 car
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳು ಗರಡಿ ಬಳಿ ಶನಿವಾರ ಮೂರು ವಾಹನಗಳ ನಡುವೆ ಸರಣಿ ಅಪಘಾತ ನಡೆದು ಆಟೋ ಚಾಲಕ ಮೂಲ್ಕಿ ನಿವಾಸಿ ರಾಜೇಶ್ ಸಹಿತ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಪಡುಬಿದ್ರಿಯತ್ತ ಚಲಿಸುತ್ತಿದ್ದ ಆಟೋಗೆ ಮಂಗಳೂರಿನತ್ತ ಸಾಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಪರಿಣಾಮ ಆಟೋ ಕಮರಿಗೆ ಉರುಳಿದೆ. ಈ ಸಂದರ್ಭ ಮಂಗಳೂರಿನತ್ತ ಚಲಿಸುತ್ತಿದ್ದ ಮತ್ತೊಂದು ಕಾರು ಅಪಘಾತಕ್ಕೀಡಾದ ಕಾರಿಗೆ ಡಿಕ್ಕಿ ಹೊಡೆದು, ಮೂರೂ ವಾಹನ ಜಖಂ ಗೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಧಾವಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net