ಮದ್ದೂರು ತಾಲೂಕು ಕುದರಗುಂಡಿ ನಿವಾಸಿ ಅಪ್ಪಾಜಿಗೌಡ(41) ಮೃತ ವ್ಯಕ್ತಿ. ಹುಚ್ಚಲಗೆರೆ ನಿವಾಸಿ ಕೀರ್ತಿರಾಜ್(35) ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ಸವಾರರು ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಮಂಡ್ಯದಿಂದ ಮದ್ದೂರಿನತ್ತ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ಕರೆ ತರಲಾಯಿತು. ಆದರೆ, ಅಪ್ಪಾಜಿಗೌಡ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದರು. ಸ್ಥಳಕ್ಕೆ ಮಂಡ್ಯ ಡಿವೈಎಸ್ಪಿ ರಮೇಶ್, ವೃತ್ತ ನಿರೀಕ್ಷಕ ಶಿವಪ್ರಸಾದ್‌ರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.