ಮೈಸೂರಿನಲ್ಲಿ ಕೆಎಸ್'ಆರ್'ಟಿಸಿ ಬಸ್'ಗಳ ನಡುವೆ ಅಪಘಾತ: ಹಲವರಿಗೆ ಗಾಯ

crime scene
Published on

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹುಣಸೂರಿನಿಂದ ಮೈಸೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಬಸ್ ಮುಂಭಾಗದಲ್ಲಿ ಸಾಗುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಕೆಎಸ್‌ಆರ್‌ಟಿಸಿ ಚಾಲಕ ದಿಢೀರಾಗಿ ಬ್ರೇಕ್ ಒತ್ತಿದ ಸಂದರ್ಭ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದಲ್ಲಿ ಇದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆಯಿತು.

ಎರಡು ಬಸ್‌ನಲ್ಲಿದ್ದ ಪ್ರಯಾಣಿಕರ ಮುಖ, ಕೈ, ಕಾಲುಗಳಿಗೆ ಗಾಯವಾಗಿದೆ. ಅಪಘಾತದಿಂದ ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net