ಅಪಘಾತದಲ್ಲಿ ಬೈಕ್ ಸವಾರ ಸಾವು

Accident
Published on

ರಾಯಬಾಗ: ಚಿಂಚಲಿ-ರಾಯಬಾಗ ರಸ್ತೆಯ ಭಿರಡಿ ಕ್ರಾಸ್ ಹತ್ತಿರ ಭಾನುವಾರ ಮಧ್ಯಾಹ್ನ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಂದಾಜು 24 ವಯಸ್ಸಿನ ಯುವಕನಾಗಿದ್ದು, ಗುರುತು ಪತ್ತೆಯಾಗಿಲ್ಲ.

ಕಾರು ರಾಯಬಾಗ ಪಟ್ಟಣದ ವ್ಯಕ್ತಿಯೋರ್ವರಿಗೆ ಸೇರಿದ್ದು ಎನ್ನಲಾಗುತ್ತಿದೆ. ರಾಯಬಾಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net