

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ 34ನೇ ನೆಕ್ಕಿಲಾಡಿಯ ಬೊಳ್ಳಾರ್ ಎಂಬಲ್ಲಿ ಜೂನ್ 7ರಂದು ಸಂಭವಿಸಿದ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ನೌಷದ್ ಬೊಳ್ಳಾರ್(34) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಬಕ್ರೀದ್ ಹಬ್ಬದಂದು ತಂದೆಯ ಸಮಾಧಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲು ಅಗರಬತ್ತಿ ಖರೀದಿಸಲೆಂದು ಅಂಗಡಿಗೆ ಹೋಗಿ ಹಿಂತಿರುಗುವಾಗ ತಾನು ಚಲಾಯಿಸುತ್ತಿದ್ದ ಬೈಕ್‌ಗೆ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದ್ದು, ನೌಷದ್ ಗಂಭೀರ ಗಾಯಗೊಂಡಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.