ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪಗೆ ಗಾಯ; ಜಿಲ್ಲಾಸ್ಪತ್ರೆಗೆ ಶಿಫ್ಟ್

Accident, Chikmammanahatti Devendrappa, goods vehicle collided with a car,
Published on

ಜಗಳೂರು: ವ್ಯಾಸಗೊಂಡನಹಳ್ಳಿ ಬಳಿ ಶನಿವಾರ ಸಂಜೆ ಸಂಭವಿಸಿದ ಕಾರು ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಾವಣಗೆರೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಗಳೂರಿಗೆ ಹಿಂತಿರುಗುವ ವೇಳೆ ಮೆದಗಿನಕೆರೆ-ವ್ಯಾಸಗೊಂಡನಹಳ್ಳಿ ಮಧ್ಯೆ ಎದುರಿನಿಂದ ಬಂದ ಗೂಡ್ಸ್ ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ. ದೇವೇಂದ್ರಪ್ಪ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

ತಕ್ಷಣ ಅವರನ್ನು ಬೇರೊಂದು ಕಾರಿನಲ್ಲಿ ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ತಮಲೇಹಳ್ಳಿ ತಿಮ್ಮಪ್ಪ ಅವರ ಕೈ ಮುರಿದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಜಗಳೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net