

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ
ರಸ್ತೆ ನಿಯಮ ಪಾಲಿಸುವುದರಿಂದ ಅಪಘಾತಗಳನ್ನು ತಪ್ಪಿಸಬಹುದು. ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿದರೆ ದಂಡದ ಜತೆಗೆ ಪಾಲಕರ ಚಾಲನಾ ಪರವಾನಗಿಯೂ ರದ್ದಾಗುತ್ತದೆ. ಮಹಿಳೆಯರಿಗೆ ಕಿರುಕುಳ ನೀಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೆಬ್ರಿ ಠಾಣೆಯ ಎಎಸ್ಸೈ ದಯಾಕರ್ ಪ್ರಸಾದ್ ಹೇಳಿದರು.
ಸಿದ್ಧನಾಯ್ಕನಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಮಕ್ಕಳ ರಕ್ಷಣೆ ಹಾಗೂ ಸುರಕ್ಷತೆಯ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಸಹಾಯವಾಣಿ, ಮೊಬೈಲ್‌ನಿಂದಾಗುವ ದೌರ್ಜನ್ಯ, ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.
ನಾಲ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೊಕ್ಕರ್ಣೆ ರೋಟರಿ ಕ್ಲಬ್ ಅಧ್ಯಕ್ಷ ಕಾಶೀನಾಥ ಶೆಣೈ ಕಜ್ಕೆ, ನಾಲ್ಕೂರು ನೇತಾಜಿ ಸೇವಾ ವೇದಿಕೆ ಅಧ್ಯಕ್ಷ ಸಿ.ಎ ಅವಿನಾಶ್ ರಾವ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್, ಸಿಎಚ್‌ಓ ಮಾನಸಾ, ಎಸ್‌ಡಿಎಂಸಿ ಅಧ್ಯಕ್ಷ ಪಾಂಡು, ಸದಸ್ಯರು, ಠಾಣಾ ಸಿಬ್ಬಂದಿ, ಪಾಲಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಪಾರ್ವತಿ ಎಂ.ವೈದ್ಯ ಸ್ವಾಗತಿಸಿದರು. ಶಿಕ್ಷಕಿ ಹರ್ಷಿತಾ ವಂದಿಸಿದರು. ಶಿಕ್ಷಕಿ ಸುಶೀಲಾ ನಿರೂಪಿಸಿದರು.