

ಬೆಳ್ತಂಗಡಿ; ಮುಂಡಾಜೆಯಿಂದ ಕಾಜೂರು ದಿಡುಪೆ ಸಂಸೆ ರಸ್ತೆಯ ಹೇಡ್ಯ ಸೊಸೈಟಿ ಬಳಿ ರಾತ್ರಿ 11 ಗಂಟೆ ಸುಮಾರಿಗೆ ನಡೆದ ರಸ್ತೆ ಅವಘಡದಲ್ಲಿ ಕೊಯ್ಯೂರಿನ ರಘು ಎಂಬವರು ದಾರುಣವಾಗಿ ಮೃತಪಟ್ಟಿದ್ದಾರೆ.
ವಿದ್ಯುತ್ ಕಂಬಕ್ಕೆ ಹುಲ್ಲು ಸಾಗಾಟದ ಪಿಕಪ್ ವಾಹನ ಡಿಕ್ಕಿಯಾದ ಪರಿಣಾಮ ನಾಲ್ಕೈದು ವಿದ್ಯುತ್ ಕಂಬಗಳು ತುಂಡಾಗಿ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವೆನ್ನಲಾಗಿದ್ದು, ಇದರ ಅರಿವಿಲ್ಲದೆ ಸ್ಕೂಟರ್ ನಲ್ಲಿ ದಿಡುಪೆ ಕಡೆಯಿಂದ ಬರುತ್ತಿದ್ದ ರಘು ಅವರ ಕುತ್ತಿಗೆಗೆ ತಂತಿಗಳು ಸಿಕ್ಕಿಕೊಂಡು ರಸ್ತೆಗೆಸೆಯಲ್ಪಟ್ಟ ಅವರು ಕೊನೆಯುಸಿರೆಳೆದಿದ್ದಾರೆ.