ಗಾಯಗೊಂಡಿದ್ದ ಕೌಲಂದೆ ಗ್ರಾಮದ ಮಹಿಳೆ ಸಾವು

14 HANUR 6 A
Published on

ಹನೂರು : ತಾಲೂಕಿನ ಕೌದಳ್ಳಿ ಸಮೀಪದ ಎಂ.ಜಿ. ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಗಾಯಗೊಂಡಿದ್ದ ಮಹಿಳೆಯೊಬ್ಬರು ಮಂಗಳವಾರ ರಾತ್ರಿ ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ನಂಜನಗೂಡು ತಾಲೂಕಿನ ಕೌಲಂದೆ ಗ್ರಾಮದ ಮಂಜುಳಾ (42) ಮೃತರು.

ಇವರು ಮಂಗಳವಾರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಪತಿ ಪ್ರಕಾಶ್ ಹಾಗೂ ಸಹೋದರನ ಪುತ್ರ ಸಚಿನ್ ಅವರೊಂದಿಗೆ ಕಾರಿನಲ್ಲಿ ಮ.ಬೆಟ್ಟಕ್ಕೆ ತೆರಳುತ್ತಿದ್ದರು.ಈ ವೇಳೆ ಎಂ.ಜಿ. ದೊಡ್ಡಿ ಬಳಿ ರಸ್ತೆಗೆ ಅಡ್ಡ ಬಂದ ಹಾವನ್ನು ರಕ್ಷಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಗೆ ಉರುಳಿತ್ತು. ಆಗ ಮೂವರು ಗಾಯಗೊಂಡಿದ್ದರು.

ಹೊಯ್ಸಳ ಪೊಲೀಸರು ಇವರನ್ನು ತುರ್ತು ವಾಹನದ ಮೂಲಕ ಕೊಳ್ಳೇಗಾಲ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಗಾಯಗೊಂಡಿದ್ದ ಮಂಜುಳಾ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡ ರಾಮಾಪುರ ಪೊಲೀಸರು ಬುಧವಾರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರಿಗೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net