ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು ; ಒಬ್ಬ ಸಾವು, ಐವರಿಗೆ ಗಾಯ

accident
Published on

ಐಮಂಗಲ: ಬುರುಜಿನರೊಪ್ಪ ಪಂಪ್‌ಹೌಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಧವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರು ಪ್ಲಾಟ್‌ನ ಸುರೇಶ (35) ಮೃತ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಚನ್ನಪಟ್ಟಣದಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದು, ತಮ್ಮ ಊರಿಗೆ ಹೋಗುವ ವೇಳೆ ಹಿರಿಯೂರು ಕಡೆಯಿಂದ ಚಿತ್ರದುರ್ಗಕ್ಕೆ ತೆರಳು ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net