

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ.
ದೊಡ್ಡಬಳ್ಳಾಪುರ-ಗೌರಿಬಿದನೂರು ರಸ್ತೆಯ ಗೊಲ್ಲಹಳ್ಳಿ ತಾಂಡಾದ ಬಳಿ ಸೋಮವಾರ ಸರಕು ಸಾಗಣೆ ವಾಹನ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಕಳಿ ಗ್ರಾಮದ ನಿವಾಸಿ ಲಕ್ಷ್ಮೀ(47), ಶಿವಪುರದ ನಿವಾಸಿ ಶಿಲ್ಪಾ (20) ಮೃತರು. ಆಟೋದಲ್ಲಿದ್ದ ಪ್ರಯಾಣಿಸುತ್ತಿದ್ದ ಹೆಣ್ಣು ಮಗು ಹಾಗೂ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾನೆ ಎಂದು ಡಿವೈಎಸ್‌ಪಿ ನಾಗರಾಜ್ ಮಾಹಿತಿ ನೀಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.