

ಮೂಗೂರು: ಇಲ್ಲಿನ ಅಂಬೇಡ್ಕರ್ ಕಾಲನಿಯ ಮುಖ್ಯ ರಸ್ತೆಯಲ್ಲಿ ಗುರುವಾರ ರಾತ್ರಿ ಕಬ್ಬು ತುಂಬಿದ ಲಾರಿ ತಾಕಿದ ಪರಿಣಾಮ ವಿದ್ಯುತ್ ಕಂಬ ಮುರಿದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಸೆಸ್ಕ್ ಸಿಬ್ಬಂದಿ, ಕಂಬವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದರಿಂದ ಕೆಲ ಗಂಟೆಗಳ ಕಾಲ ವಿದ್ಯುತ್ ಇಲ್ಲದೆ ಸಮಸ್ಯೆಯಾಗಿತ್ತು.
ಮೂಗೂರಿನಿಂದ ಲಾರಿಯು ಅಧಿಕ ಪ್ರಮಾಣದಲ್ಲಿ ಕಬ್ಬು ಸಾಗಿಸುತ್ತಿದ್ದರಿಂದ ಈ ಅವಘಡ ಸಂಭವಿಸಿದೆ. ಕಿರಿದಾದ ಈ ರಸ್ತೆಗಳು ಹಾಳಾಗುವುದರ ಜತೆಗೆ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ. ಈ ಮಾರ್ಗದಲ್ಲಿ ಲಾರಿ ಸಂಚಾರ ಸ್ಥಗಿತಗೊಳಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.