ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದ ನವದಂಪತಿಗೆ ಜವರಾಯನಂತೆ ಬಂದೆರಗಿದ ಟ್ರಕ್​

New Couple
Published on

ಮಂಗಳೂರು: ನಗರದ ಹೊರ ವಲಯದ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಮಂಗಳವಾರ ಸಂಜೆ ಲಾರಿ ಬೈಕ್‌ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ.

ಮಂಗಳೂರು ಬಜಾಲ್‌ನ ರಾಯನ್ ಫರ್ನಾಂಡಿಸ್ (34) ಹಾಗೂ ಪತ್ನಿ ಪ್ರಿಯಾ ಫರ್ನಾಂಡಿಸ್ (25) ಮೃತಪಟ್ಟವರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ಉತ್ತರ ಪ್ರದೇಶ ನೋದಣಿ ಸಂಖ್ಯೆಯ ಲಾರಿ ಡಿಕ್ಕಿ ಹೊಡೆದಿದೆ. ಹಿಂಬದಿ ಸವಾರರಾಗಿದ್ದ ಪ್ರಿಯಾ ಅವರ ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸವಾರ ರಾಯನ್ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ. ದಂಪತಿ ಕೆಲವು ದಿನಗಳಿಂದ ಉಳ್ಳಾಲ ಮಾಸ್ತಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರಿಬ್ಬರೂ ಕಂಕನಾಡಿ ಫಾದರ್ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net