ಬುಲೆರೋ ವಾಹನಕ್ಕೆ ಡಿಕ್ಕಿ: ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

Accident
Published on

ವಿಜಯಪುರ: ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿಯ ಕವಲಗಿ ಹತ್ತಿರದಲ್ಲಿ ಈ ದುರಂತ ಸಂಭವಿಸಿದ್ದು, ಪ್ರದೀಪ ಭೀಮು ರಾಠೋಡ(18) ಹಾಗೂ ಅನೀಲ ಚಿನ್ನು ರಾಠೋಡ (18) ಮೃತ ದುರ್ದೈವಿಗಳು.

ಅಪಘಾತ ನಡೆದ ಕೂಡಲೇ ಚಾಲಕ ಬುಲೆರೋ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net