ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

Death 5 May 20
Published on

ಬೆಳಗಾವಿ: ತಾಲೂಕಿನ ಉಕ್ಕಡ ಗ್ರಾಮದ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಚಿಕ್ಕೋಡಿ ತಾಲೂಕಿನ ಯಾದನವಾಡಿ ಗ್ರಾಮದ ಬಿ.ಎ. ಮುರಗಲೆ (27) ಮೃತ ಯುವಕ. ಬುಧವಾರ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೈಕ್‌ನಲ್ಲಿ ಬೆಳಗಾವಿಯಿಂದ ಸಂಕೇಶ್ವರ ಕಡೆಗೆ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದಿದ್ದರಿಂದ ತಲೆಗೆ ತೀವ್ರ ಗಾಯವಾಗಿತ್ತು.

ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ ಎಂದು ಕಾಕತಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net