ಗಾಯಾಳುಗಳ ಆಸ್ಪತ್ರೆಗೆ ಸೇರಿಸಿದ ಡಿವೈಎಸ್ಪಿಗೆ ಜನರಿಂದ ಪ್ರಶಂಸೆ

IMG-20201115-WA0019
Published on

ಶಿವಮೊಗ್ಗ: ಶಿವಮೊಗ್ಗ-ಸಾಗರ ರಾಷ್ಟ್ರೀಯ ಹೆದ್ದಾರಿ ಲಯನ್ ಸಫಾರಿ ಎದುರು ಭಾನುವಾರ ಮಧ್ಯಾಹ್ನ ಕಾರಿಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕರಿಬ್ಬರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಡಿವೈಎಸ್ಪಿ ಉಮೇಶ್ ನಾಯ್ಕ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ.
ಶಿವಮೊಗ್ಗದಿಂದ ಆಯನೂರು ಕಡೆಗೆ ಹೊರಟಿದ್ದ ಸ್ವಿಫ್ಟ್ ಕಾರಿಗೆ ಎದುರಿನಿಂದ ಬಂದ ಡಿಯೋ ಬೈಕ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಾಯಗೊಂಡವರ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ.
ಈ ವೇಳೆ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಡಿವೈಎಸ್ಪಿ ಸ್ಥಳಕ್ಕೆ ಬಂದು ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರನ್ನೂ ಸ್ಥಳೀಯರ ಸಹಕಾರದಿಂದ ಬೇರೊಂದು ವಾಹನದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರು. ಮಾಡಿದ್ದು ಕರ್ತವ್ಯವೇ ಆದರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಡಿವೈಎಸ್ಪಿ ಕಾರ್ಯಕ್ಕೆ ಅಲ್ಲಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net