ಅಪಘಾತಕ್ಕೆ ಸಹೋದರರು ಬಲಿ

scooty
Published on

ಬೆಳ್ಮಣ್: ನಂದಳಿಕೆಯ ಸಹೋದರರಿಬ್ಬರು ಸ್ಕೂಟಿ ಅಪಘಾತಕ್ಕೆ ಬಲಿಯಾದ ಘಟನೆ ಮಾವಿನಕಟ್ಟೆಯಲ್ಲಿ ನಡೆದಿದೆ.

ನಂದಳಿಕೆ ಮಹಾಲಿಂಗೇಶ್ವರ ದೇವಾಲಯದ ಬಳಿಯ ನಿವಾಸಿಗಳಾದ ಸತೀಶ್ ಕುಲಾಲ್(28) ಹಾಗೂ ಸಂದೀಪ್ ಕುಲಾಲ್ (25) ಮೃತರು.

ಭಾನುವಾರ ಬೆಳಗ್ಗೆ ಕಾರ್ಕಳ ಕಡೆಯಿಂದ ಬೆಳ್ಮಣ್‌ಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೃತಪಟ್ಟಿದ್ದಾರೆ. ಸಂದೀಪ್ ಸ್ಥಳದಲ್ಲೇ ಮೃತ ಪಟ್ಟರೆ ಸತೀಶ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಂದೀಪ್ ಅವಿವಾಹಿತರಾಗಿದ್ದು, ಸತೀಶ್‌ಗೆ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net