ಕಾರು-ಲಾರಿ ಅಪಘಾತ; ಮೂರು ತಿಂಗಳ ಶಿಶು ಸೇರಿ ಮೂವರ ಮೃತ್ಯು

Accident
Published on

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ವಿಜಯಪುರ ಗ್ರಾಮದ ಗೊಲ್ಲರಹಟ್ಟಿ ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ ನಿವಾಸಿಗಳಾದ ಅಹಮ್ಮದ್​(60), ತಬಸ್ಸುಮ್​(28), ಮೂರು ತಿಂಗಳ ಹೆಣ್ಣು ಮಗು ಹಯಾತ್​ ಫಾತಿಮಾ ಎಂದು ಗುರುತಿಸಲಾಗಿದೆ. ​ಘಟನೆಯಲ್ಲಿ ಇಮ್ರಾನ್​ ಖಾನ್​(32), ತಬ್ರೀಜ್​ ಅಹಮ್ಮದ್​(27), ಸಬಾ(26), ನಯಾಜ್​(22) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗೋವಾದಿಂದ ಬೆಂಗಳೂರಿನತ್ತ ಹೊರಟ್ಟಿದ್ದ ಕುಟುಂಬವು ಚಿತ್ರದುರ್ಗ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ವಿಜಯಪುರ ಗ್ರಾಮದ ಗೊಲ್ಲರಹಟ್ಟಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂಬರಿ ಸಂಚರಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿಯೇ ಮೂವರು ಪ್ರಾಣ ಬಿಟ್ಟಿದ್ದು ಗಂಭೀರವಾಗಿ ಗಾಯಗೊಂಡಿರುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಕೆ.ಪರಶುರಾಮ್​ ತಿಳಿಸಿದ್ದಾರೆ.

ctr accident
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net