ಬಂಡೀಪುರದ ರಸ್ತೆಯಲ್ಲಿ ಲಾರಿ ಪಲ್ಟಿ

IMG-20241005-WA0137
Published on

ಗುಂಡ್ಲುಪೇಟೆ : ತಾಲೂಕಿನ ಬಂಡೀಪುರದ ರಸ್ತೆಯಲ್ಲಿ ಶನಿವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿದೆ. ನೆರೆಯ ತಮಿಳುನಾಡಿನಿಂದ ಪ್ಲೇವುಡ್ ಶೀಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಬಂಡೀಪುರದ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದಾಗ ಮೇಲುಕಾಮನಹಳ್ಳಿ ಚೆಕ್‌ಪೋಸ್ಟ್ ಸಮೀಪದ ತಿರುವಿನಲ್ಲಿ ಬ್ರೆಕ್‌ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಚಾಲಕ ತೀವ್ರವಾಗಿ ಗಾಯಗೊಂಡು ಲಾರಿಯಲ್ಲೇ ಸಿಲುಕಿಕೊಂಡು ಹೊರ ಬರಲಾದರೆ ಜೀವನ್ಮರಣ ಹೋರಾಟ ನಡೆಸುತ್ತಿದ್ದ ವೇಳೆ ತಕ್ಷಣವೇ ಕಾರ್ಯಪ್ರವೃತ್ತರಾದ ಗುಂಡ್ಲುಪೇಟೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕ್ರೇನ್ ಸಹಾಯದಿಂದ ಚಾಲಕನನ್ನು ಹೊರ ತೆಗೆದು ಗುಂಡ್ಲುಪೇಟೆ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net