ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕೂಲಿಗೆ ಹೊರಟಿದ್ದ ಇಬ್ಬರ ದುರ್ಮರಣ

accident
Published on

ಹುಬ್ಬಳ್ಳಿ: ತಾಲೂಕಿನ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಆಟೋ ಮತ್ತು ಟ್ರ್ಯಾಕ್ಟರ್​ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಹಳೇ ಹುಬ್ಬಳ್ಳಿಯ ಸಾಧೀಕ್, ಸಲೀಮ್ ಹಾಗೂ ಬೆಳಗಲಿ ಮೂಲದ ಶೇಕರಪ್ಪ ಹುಲಗೇರಿ ಸೇರಿದಂತೆ ಇನ್ನೂ ನಾಲ್ವರು ಆಟೋದಲ್ಲಿ ತೆರಳುತ್ತಿದ್ದರು. ಇವರೆಲ್ಲರೂ ಕೂಲಿಗಾಗಿ ಆಟೋದಲ್ಲಿ ಹೊರಟಿದ್ದರು. ಈ ಸಮಯದಲ್ಲಿ ವರೂರು ಗ್ರಾಮದ ಕೂಗಳತೆಯ ದೂರದಲ್ಲಿ ಗುಡ್ಡದ ಹೂಲಿಕಟ್ಟಿ ಗ್ರಾಮದ ಟ್ರ್ಯಾಕ್ಟರ್​ ಆಟೋಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದಾಗಿಯೇ ಈ ಅಪಘಾತ ಸಂಭವಿಸಿರುವುದಾಗಿ ಹೇಳಲಾಗಿದೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net