ನಾಗರ ನವಿಲೆ ಬಳಿ ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವು

Nagara Navile Accident 29 APR 20
Published on

ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ನಾಗರನವಿಲೆ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಹೊಸಹಳ್ಳಿ ಗ್ರಾಮದ ಅರುಣ್ (18) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. 

ಮಂಗಳವಾರ ಬೆಳಗ್ಗೆ ತನ್ನ ದ್ವಿಚಕ್ರ ವಾಹನದಲ್ಲಿ ಕಾರ್ಯನಿಮಿತ್ತ ನಾಗರನವಿಲೆ ಗ್ರಾಮಕ್ಕೆ ತೆರಳಿದ್ದ ಅರುಣ್ ಕೆಲಸ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದ ವೇಳೆ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದರಿಂದ ಹಾರಿ ರಸ್ತೆ ಮೇಲೆ ಬಿದ್ದಿದ್ದಾನೆ. ಬಳಿಕ ಟಿಪ್ಪರ್ ಲಾರಿಯ ಹಿಂಬದಿ ಚಕ್ರಗಳು ಅರುಣನ ಸೊಂಟದಿಂದ ಕೆಳಭಾಗದ ಮೇಲೆ ಹರಿದಿವೆ. ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಇದನ್ನು ಗಮನಿಸಿದ ಟಿಪ್ಪರ್ ಲಾರಿಯ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದ ನುಗ್ಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಶವವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದರು. ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net