ನೆಲಮಂಗಲ ಸಮೀಪ ಟ್ಯಾಂಕರ್- ಕಾರು ಡಿಕ್ಕಿ: ನಾಲ್ವರ ಪೈಕಿ ಓರ್ವ ಸಾವು

Accident Truck car nelamangala
Published on

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕು ಮಾದನಾಯಕನ ಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಯುವಕರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ.

ಇಂದು ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಮೃತನನ್ನು ಬೆಂಗಳೂರಿನ ಗಾಯತ್ರಿ ನಗರದ ದೀಕ್ಷಿತ್ ಕುಮಾರ್ (26) ಎಂದು ಗುರುತಿಸಲಾಗಿದೆ. ಚಾಲಕ ನಾಗರ್ಜುನ, ರವಿ ಮತ್ತು ವಿನೋದ್ ಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ತತ್​ಕ್ಷಣವೇ ಬೆಂಗಳೂರಿನ 8ನೇ ಮೈಲಿಯ ಖಾಸಗಿ ಆಸ್ಪತ್ರಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಮತ್ತು ಕಾರು ಪೊಲೀಸ್ ವಶದಲ್ಲಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net