

ವಿಜಯವಾಣಿ ಸುದ್ದಿಜಾಲ ಕಲಬುರಗಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಇಂದು ಬೆಳಗ್ಗೆ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಉಜ್ಮಾ ಮೆಹಬೂಬಸಾಬ (10), ವಾಜೀದ್ ಮೆಹಬೂಬ ಕಾಕನೂರ (,3) , ಮೆಹಬೂಬಿ ಉಸ್ಮಾನಸಾಬ (53) ಪ್ರಿಯಾಂಕಾ ಮಂಜುನಾಥ ಉತ್ತೂರ (14) ಹಾಗೂ ಮೆಹಬೂಬ್ ಉಸ್ಮಾನಸಾಬ (30) ಮೃತರು.
ಮೃತಪಟ್ಟವರು ಹಾಗೂ ಗಾಯಗೊಂಡವರು ಬಾಗಲಕೋಟನ ತೆಂಗಿನಮಠ ಹಾಗೂ ಜಿಲ್ಲೆಯ ಕಾಕನೂರದವರು ಎಂದು ಪೊಲೀಸರು ತಿಳಿಸಿದ್ದಾರೆ.
ಲಾರಿ ಕೆಟ್ಟಿದ್ದರಿಂದ ಪಕ್ಕಕ್ಕೆ ನಿಲ್ಲಿಸಲಾಗಿತ್ತು. ಇಂದು ನಸುಕಿನಲ್ಲಿ ಕಲಬುರಗಿ ಕಡೆಗೆ ಬರುತ್ತಿದ್ದ ಬಸ್ ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ 15 ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಹಾಗೂ ಸಿಬ್ಬಂದಿ ಭೇಟಿ ನೀಡಿದರು. ವಾಹನಗಳ ತೆರವುಗೊಳಿಸುವ ಕಾರ್ಯ ನಡೆದಿದೆ. ನೆಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.