ಕುಪ್ಪೆಟ್ಟಿಯಲ್ಲಿ ಅಪಘಾತ - ದ್ವಿಚಕ್ರ ವಾಹನ ಸವಾರ ಮೃತ್ಯು

123
Published on

ಪುತ್ತೂರು: ಉರುವಾಲುಪದವು ಕುಪ್ಪೆಟ್ಟಿ ಬನಾರಿ ಎಂಬಲ್ಲಿ ಪಿಕಪ್ ದ್ವಿಚಕ್ರ ವಾಹಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಮೃತ ಪಟ್ಟು ಸಹಸವಾರ ಗಂಭೀರ ಗಾಯಗೊಂಡ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ಉರುವಾಲುಪದವು ನಿವಾಸಿ ಅಬ್ಬೂಬಕ್ಕರ್ (73) ಮೃತ ವ್ಯಕ್ತಿಯಾಗಿದ್ದಾರೆ. ಅವರ ಪತ್ನಿ ಬಿಪಾತುಮ್ಮ (60) ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಬ್ಬೂಬಕ್ಕರ್ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಮೃತಪಟ್ಟಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ದೇಹವನ್ನು ಇಡಲಾಗಿದೆ. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net