

ನಿಪ್ಪಾಣಿ: ಇಲ್ಲಿನ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಮಂಗಳವಾರ ನಡೆದ ಬೈಕ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಆಶ್ರಯನಗರದ ರಶೀದ್ ಸಿಕಂದರ್ ಮುಜಾವರ (46) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳೀಯ ಸಹಕಾರಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ರಶೀದ್ ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪ್ರಕರಣ ದಾಖಲಿಸಿಕೊಂಡ ನಿಪ್ಪಾಣಿ ಶಹರ್ ಠಾಣೆ ಪೊಲೀಸರು ತಿಳಿಸಿದ್ದಾರೆ.