

ಕೊಕ್ಕಡ: ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಎಂಬಲ್ಲಿ ಬೈಕ್ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಸ್ಕೂಟಿ ಸವಾರ ಗೋಳಿತ್ತೊಟ್ಟು ನಿವಾಸಿ ಪ್ರಕಾಶ್ ಪಟೇರಿ ಅವರ ಕಾಲು ತುಂಡಾಗಿದೆ. ಬೈಕ್ ಸವಾರ ಚಂದ್ರಶೇಖರ ಅಂಬರ್ಜೆ ಹಾಗೂ ಅವರ ಪುತ್ರ ತೇಜಸ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ತೇಜಸ್‌ನನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಹಾಗೂ ಪುತ್ತೂರು ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.