ಅಪಘಾತ ಗಾಯಾಳು ಮೃತ್ಯು

New Project (7)
Published on

ಮೂಡುಬಿದಿರೆ: ಬೆಳುವಾಯಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆ.16ರಂದು ನಡೆದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಂದೀಪ್(25) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಸಂದೀಪ್ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ನಿವಾಸಿಯಾಗಿದ್ದು, ಖಾಸಗಿ ಕಂಪನಿಯೊಂದರಲ್ಲಿ ನೌಕರಿಯಲ್ಲಿದ್ದರು. 16ರಂದು ಸಾಯಂಕಾಲ ಸಂದೀಪ್ ಹಾಗೂ ಅವರ ಮೂವರು ಸ್ನೇಹಿತರು ಕಾರಿನಲ್ಲಿ ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಬೆಳುವಾಯಿಯಲ್ಲಿ ಹೋಗುವಾಗ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ವೇಣೂರು ಪೆರ್ಮುಡದ ಸುಮಿತ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರೊಂದಿಗೆ ಇದ್ದ ಸಂದೀಪ್ ಸಹಿತ ಇತರರು ಗಾಯಗೊಂಡಿದ್ದರು. ಸೊಂಟದ ಭಾಗದಲ್ಲಿ ಬಲವಾಗಿ ಪೆಟ್ಟು ಬಿದ್ದಿದ್ದ ಸಂದೀಪ್ ಭಾನುವಾರ ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net