ಅಪಘಾತದಲ್ಲಿ ಸಾವು

Published on

ಕನಕಪುರ: ತಾಲೂಕಿನ ಸಾತನೂರು ಪೊಲೀಸ್​ ಠಾಣಾ ವ್ಯಾಪ್ತಿಯ ಕೆಮ್ಮಾಳೆ ಗ್ರಾಮದ ಬಳಿ ಬೈಕ್​ಗಳ ನಡುವೆ ಡಿಕ್ಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದು, ದಯಾನಂದ ಸಾಗರ್​ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾನೆ. ಉತ್ತರ ಪ್ರದೇಶದ ಹರೀಶ್​(25) ಮೃತ. ಗುರುವಾರ ಮಳವಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ನಗರದ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಸಾತನೂರು ಪೊಲೀಸರು ಸ್ಥಳ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net