ಹೈಪರ್ ಮಾರ್ಕೆಟ್‌ನಲ್ಲಿ ಬೆಂಕಿ ಆಕಸ್ಮಿಕ

Fire safety
Published on

ಕಾಸರಗೋಡು: ಉಪ್ಪಳ ಪತ್ವಾಡಿ ರಸ್ತೆಯಲ್ಲಿ ಕಾರ್ಯಾಚರಿಸುವ ಹೈಪರ್ ಮಾರ್ಕೆಟ್‌ನಲ್ಲಿ ಬೆಂಕಿ ಆಕಸ್ಮಿಕದಿಂದ ವಿವಿಧ ಸಾಮಗ್ರಿ, ಫ್ರಿಡ್ಜ್, ಎಸಿ ಹಾನಿಗೀಡಾಗಿದೆ. ಶನಿವಾರ ಬೆಳಗ್ಗೆ 8.30ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ನೀಡಿದ ಮಾಹಿತಿಯನ್ವಯ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ಶಮನಗೊಳಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net