ಅಂಗಡಿಗೆ ಆಕಸ್ಮಿಕ ಬೆಂಕಿ

14-03-Shiva-4
ರಾಯಚೂರಿನ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ಶಾನ್ ಕುಷನ್ ವರ್ಕ್‌ಶಾಪ್ ಕಟ್ಟಡದಲ್ಲಿ ಗುರುವಾರ ಬೆಂಕಿ ಹತ್ತಿಕೊಂಡು ಹೊಗೆ ಎದ್ದಿರುವುದು.
Published on

ರಾಯಚೂರು: ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿರುವ ಶಾನ್ ಕುಷನ್ ವರ್ಕ್ ಶಾಪ್ ಕಟ್ಟಡದಲ್ಲಿ ಗುರುವಾರ ವಿದ್ಯುತ್ ಅವಘಡದಿಂದಾಗಿ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂ. ವೌಲ್ಯದ ಸಾಮಗ್ರಿಗಳು ಹಾನಿಗೊಳಗಾಗಿವೆ.
ಸೈಯದ್ ಫಿದಾಲಿ ಎನ್ನುವವರಿಗೆ ಕಟ್ಟಡದ ಮೂರನೇ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ಹಬ್ಬದೆ ಹೆಚ್ಚಿನ ಹಾನಿಯಾಗಿಲ್ಲ.
ಕಟ್ಟಡದಲ್ಲಿದ್ದ ವಾಹನಗಳ ಸೀಟ್ ಕವರ್, ರ‌್ಯಾಗ್ಜೀನ್ ಸೇರಿದಂತೆ ವಿವಿಧ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಪಶ್ವಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net