ಅಪಘಾತ ಮೂವರು ಇಂಜಿನಿರಿಂಗ್ ವಿದ್ಯಾರ್ಥಿಗಳ ಸಾವು

Screenshot_2025-09-16-17-52-37-747_com.whatsapp-edit
Published on
ಹಾರೋಹಳ್ಳಿ (ರಾಮನಗರ)
 ಲಾರಿ ಮತ್ತು ಬೈಕ್ ನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು  ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟಣದ ಕೆರೆ ಏರಿ ಮೇಲೆ ಜರುಗಿದೆ.
          ಸಾವನ್ನಪ್ಪಿರುವ ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚೆನ್ನಮಂಗಲ ಗ್ರಾಮದ ರಕ್ಷಿತ್ ಗೌಡ (19), ದರ್ಶನ್(19), ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು ಕೊಪ್ಪಳ ಜಿಲ್ಲೆಯ ಕುಪ್ಪನೂರು ಪಟ್ಟಣದ ಗವಿಸಿದ್ದೇಶ್ (19) ಗುರುತಿಸಲಾಗಿದ್ದು , ಈತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
 ಮೂವರೂ ವಿದ್ಯಾರ್ಥಿಗಳು ದಯಾನಂದ್ ಸಾಗರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ಬಿಇ  ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿಗಳು ಆಕ್ಟಿವಾ ಬೈಕಿನಲ್ಲಿ ಬೆಂಗಳೂರು ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಈ  ಅವಘಡ ಸಂಭವಿಸಿದೆ.
    ಹಾರೋಹಳ್ಳಿ ಕೆರೆ ಏರಿ ಅಪಘಾತಗಳಿಗೆ ಹಾಟ್ ಸ್ಪಾಟ್ ಆಗಿದ್ದು ಇದುವರೆಗೂ ನೂರಾರು ಅಪಘಾತಗಳು ಸಂಭವಿಸಿದ್ದು ಹತ್ತಾರು ಮಂದಿ ಜೀವ ಕಳೆದುಕೊಂಡಿದ್ದಾರೆ ಕೆರೆ ಏರಿಯ ಮೇಲೆ ಹಲವಾರು ತಿರುವುಗಳಿದ್ದು ತಿರುಗುಗಳಲ್ಲಿ ವೇಗವಾಗಿ ಬರುವ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತಗಳು ಸಂಭವಿಸುತ್ತಿವೆ ಹಲವಾರು ಅಪಘಾತಗಳು ಸಂಭವಿಸಿದ್ದರು ಸಹ ಪೊಲೀಸರು ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿದ್ದಾರೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ.
 ದಯಾನಂದ್ ಸಾಗರ್ ಇಂಜಿನಿಯರಿಂಗ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಈ ಹಿಂದೆಯೂ ನಡೆದ ಹಲವಾರು ಅಪಘಾತಗಳಲ್ಲಿ ಸಾವನ್ನಪ್ಪಿದ್ದು ಇಂತಹ ಘಟನೆಗಳು ನಡೆಯುತ್ತಿದ್ದರೂ ಸಹ ದಯಾನಂದ್ ಸಾಗರ್ ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗೆ ಮುಂಜಾಗ್ರತ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲು ಎಡವುತ್ತಿದೆ ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗುತ್ತಿಲ್ಲ ಎನ್ನುವುದು ಮೊದಲಿನಿಂದಲೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ ಈಗಲಾದರೂ ಕಾಲೇಜು ಆಡಳಿತ ಮಂಡಳಿ ಹಾಗೂ ಹಾರೋಹಳ್ಳಿ ಪೊಲೀಸರು ಅಪಘಾತಗಳ ಜಾಗೃತಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮೂಡಿಸಬೇಕಾದ ಅವಶ್ಯವಿದೆ.
 ವಿದ್ಯಾರ್ಥಿಗಳು ಸಹ ವಾಹನ ಚಾಲನೆ ಮಾಡುವಾಗ ಕಡಿಮೆ ವೇಗದಲ್ಲಿ ವಾಹನ ಚಲಾಯಿಸಬೇಕಿದೆ . ಹಾರೋಹಳ್ಳಿ ಬಳಿಯ ಚಂದ್ರಮ್ಮ ದಯಾನಂದ ಸಾಗರ್ ಆಸ್ಪತ್ರೆಗೆ ಮೃತ ದೇಹಗಳನ್ನು ರವಾನಿಸಲಾಗಿದ್ದು ಶವಪರೀಕ್ಷೆ ಮಾಡಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಹಾರೋಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net