

ಬೆಳಗಾವಿ: ಮಕ್ಕಳ ಕಲಿಕಾ ಹಿತದೃಷ್ಟಿಯಿಂದ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ. ಪಾಟೀಲ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದರು. ಗ್ರಾಮೀಣ ವಿಧಾನಸಭಾ ಕ್ಷೇತ್ರ ವಿಶಾಲವಾಗಿದ್ದು, ಬಾಗೇವಾಡಿ ಬ್ಲಾಕ್‌ನಲ್ಲಿ ಮುರಾರ್ಜಿ ವಸತಿ ಶಾಲೆ ಇಲ್ಲ. ಬೆಳಗಾವಿ ತಾಲೂಕಿನ ಇತರೆಡೆ ವಸತಿ ಶಾಲೆಗಳಲ್ಲಿ ಪ್ರವೇಶ ಸಿಗದೆ ಗ್ರಾಮೀಣ ಕ್ಷೇತ್ರದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಬಾಗೇವಾಡಿ ಬ್ಲಾಕ್ ವ್ಯಾಪ್ತಿಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮುರಾರ್ಜಿ ದೇಸಾಯಿ ವಸತಿ ಶಾಲೆ ಅವಶ್ಯಕತೆ ಇದ್ದು, ಮಂಜೂರು ಮಾಡಿಸುವಂತೆ ಸಿ.ಸಿ. ಪಾಟೀಲ ಕೋರಿದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಇದ್ದರು.