ಎಸ್ಸಿ, ಎಸ್ಟಿ ಹಣ ದುರ್ಬಳಕೆ ಆರೋಪ

RON MANAVI
Published on

ರೋಣ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಸಾವಿರಾರೂ ಕೋಟಿ ರೂಪಾಯಿಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ರೋಣ ಮಂಡಲ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಗುರುವಾರ ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಎಸ್ಸಿ ಮೋರ್ಚಾ ಮಂಡಲಾಧ್ಯಕ್ಷ ಭೀಮಪ್ಪ ಮಾದರ ಮಾತನಾಡಿ, ಚುನಾವಣೆ ಪೂರ್ವದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕು ಎಂದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ಘೊಷಣೆ ಮಾಡಿತು. ಆದರೆ, ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ಇದರಿಂದ ದಲಿತರಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಪಕ್ಷದ ಈ ನಡೆಯನ್ನು ಖಂಡಿಸಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಅಶೋಕ ನವಲಗುಂದ ಮಾತನಾಡಿ, ಕಾಂಗ್ರೆಸ್ ಸರ್ಕಾರ ತನ್ನ ಹಿತಾಸಕ್ತಿಗಾಗಿ ದಲಿತರ ಅಭಿವೃದ್ಧಿಗೆಂದು ಮೀಸಲಿಟ್ಟಿದ್ದ ಹಣವನ್ನು ದುರುಪಯೋಗ ಪಡಿಸಿಕೊಂಡು ದಲಿತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಾನಂದ ಜಿಡ್ಡಿಬಾಗಿಲ, ಮಲ್ಲು ಮಾದರ, ಮಂಜು ಬುರಡಿ, ಡಿ.ಜಿ. ಕಟ್ಟಿಮನಿ, ಮೈಲಾರಪ್ಪ ಮಾದರ, ಚಂದ್ರು ಹಂಚನಾಳ, ಮುತ್ತಪ್ಪ ಜೋಗಣ್ಣವರ, ಮುತ್ತಪ್ಪ ಪೂಜಾರ, ಶಿವಕುಮಾರ ಜಾಧವ, ಬಸವರಾಜ ಹಿರೇಮಣ್ಣೂರ, ಶೇಖಪ್ಪ ಹಿರೇಮಣ್ಣೂರ, ಶಿವರಾಜ ಹುಲ್ಲೂರ, ಮಂಜು ಸಂಗಟಿ, ಮಂಜು ಚಲುವಾದಿ, ಶಿವರಾಜ ಅಮರಾವತಿ, ಬಸವರಾಜ ದೊಡ್ಡಮನಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net