

ಕಾಸರಗೋಡು: ಕುಂಜತ್ತೂರಿನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಬೈಕ್‌ನಲ್ಲಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಕುಂಜತ್ತೂರು ಪದವು ನಿವಾಸಿ ಯಾಸಿನ್ ಇಮ್ರಾಜ್ ಕೆ.ಎಂ. ಎಂಬಾತನನ್ನು ಬಂಧಿಸಿದ್ದಾರೆ. ಆತನ ವಶದಲ್ಲಿದ್ದ 4 ಗ್ರಾಂ ಮೆಥಾಫಿಟಾಮಿನ್ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಅಬಕಾರಿ ಸ್ಪೆಷಲ್ ಸ್ಕ್ವಾಡ್‌ನ ಇನ್‌ಸ್ಪೆಕ್ಟರ್ ಪ್ರಶೋಬ್ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ.