ಅಡಕೆ ಕಳವು ಆರೋಪಿಗಳ ಬಂಧನ

arrested
Published on

ಕಾರ್ಕಳ: ಮುಂಡ್ಕೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಅಡಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ಆರೋಪಿಗಳನ್ನು ಬಂಧಿಸಿ 5 ಲಕ್ಷ ರೂ. ಮೌಲ್ಯದ ಅಡಕೆಯನ್ನು ವಶಪಡಿಸಿಕೊಂಡಿದ್ದಾರೆ. ಮುಂಡ್ಕೂರಿನ ತೋಟದ ಮನೆಯಲ್ಲಿ ಆಗಸ್ಟ್ 23ರಂದು ಅಡಕೆ ಕಳುವಾದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರ್ಕಳ ವೃತ್ತ ನೀರಿಕ್ಷಕ ಮಂಜಪ್ಪ ನೇತೃತ್ವದ ತಂಡ 12 ಮಂದಿ ಆರೋಪಿಗಳನ್ನು ಬಂಧಿಸಿ 1,100 ಕೆ.ಜಿ. ಅಡಕೆ ವಶಪಡಿಸಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net