30 ವರ್ಷಗಳ ಬಳಿಕ ಸಿಕ್ಕಿಬಿದ್ದ ಕೊಲೆ ಆರೋಪಿ; ಮಹಿಳೆಯ ಕುತ್ತಿಗೆಗೆ ಸೀರೆ ಬಿಗಿದು ಕೊಂದಿದ್ದ...

Shankarappa
Published on

ತುಮಕೂರು: ಮಹಿಳೆಯೊಬ್ಬರ ಕುತ್ತಿಗೆಗೆ ಸೀರೆಯನ್ನು ಬಿಗಿದು ಕೊಲೆ ಮಾಡಿದ್ದ ಆರೋಪಿ ಕೊನೆಗೂ 30 ವರ್ಷಗಳ ಬಳಿಕ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ತುಮಕೂರು ಜಿಲ್ಲೆಯ ಶಿರಾ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.

ಶಂಕರಪ್ಪ (55) ಬಂಧನಕ್ಕೆ ಒಳಗಾಗಿರುವ ಕೊಲೆ ಆರೋಪಿ. ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1991ರಲ್ಲಿ ಜಮೀನು ವಿಚಾರವಾಗಿ ಗಂಗಮ್ಮ ಎಂಬ ಮಹಿಳೆಯ ಕುತ್ತಿಗೆಗೆ ಸೀರೆಯನ್ನು ಬಿಗಿದು ಶಂಕರಪ್ಪ ಕೊಲೆ ಮಾಡಿದ್ದ. ಈ ಕುರಿತು ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕೊಲೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ರಾಜ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗೆ ತಳ್ಳಿದ್ದರು. ಆದರೆ ಇನ್ನೊಬ್ಬ ಆರೋಪಿ ಶಂಕರಪ್ಪ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆಂಧ್ರಪ್ರದೇಶದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net