ಶ್ರೀಗಂಧ ಸಂಗ್ರಹಿಸಿದ್ದ ಆರೋಪಿ ಬಂಧನ

12 HANUR 4 A
Published on

ಹನೂರು: ತಾಲೂಕಿನ ಮಂಗಲ ಗ್ರಾಮದ ಮನೆಯೊಂದರ ಮೇಲೆ ಭಾನುವಾರ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಬೀರುವಿನಲ್ಲಿ ಸಂಗ್ರಹಿಸಿದ್ದ ಸುಮಾರು 100 ಕೆಜಿಗೂ ಹೆಚ್ಚು ತೂಕವುಳ್ಳ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದು ಆರೋಪಿಯೊಬ್ಬರನ್ನು ಬಂಧಿಸಿದ್ದಾರೆ.

ಗ್ರಾಮದ ರಾಜಮ್ಮ ಬಂಧಿತ ಆರೋಪಿ. ಈಕೆಯ ಮನೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಲೆಮಹದೇಶ್ವರ ವನ್ಯಜೀವಿ ವಲಯದ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಎಸಿಎಫ್ ವಿರಾಜ್ ಹೊಸೂರ್, ಆರ್‌ಎಫ್‌ಒಗಳಾದ ಉಮಾಪತಿ, ನಾಗರಾಜು ಹಾಗೂ ಸಿಬ್ಬಂದಿ ತಂಡ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಬೀರುವಿನಲ್ಲಿ ಶ್ರೀಗಂಧದ ತುಂಡುಗಳನ್ನು ಸಂಗ್ರಹಿಸಿರುವುದು ದೃಢಪಟ್ಟಿದೆ. ಬಳಿಕ ಬೀರುವಿನ ಸಮೇತ ಶ್ರೀಗಂಧ ತುಂಡುಗಳನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net