ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

mng--23 may Navaz shariff
Published on

ಮಂಗಳೂರು: ನಗರದಲ್ಲಿ 2020ರಲ್ಲಿ ಎನ್‌ಆರ್‌ಸಿ, ಸಿಎಎ ಕಾಯಿದೆಗೆ ಸಂಬಂಧಿಸಿದಂತೆ ನಡೆದಿದ್ದ ಗಲಭೆಯ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದರು ಪೊಲೀಸರು ಬಂಧಿಸಿ, ಮಂಗಳೂರಿಗೆ ಕರೆ ತಂದಿದ್ದಾರೆ.


ಅಡ್ಯಾರ್ ವಳಚ್ಚಿಲ್ ರೈಲ್ವೆ ಗೇಟ್ ಬಳಿಯ ನಿವಾಸಿ ನವಾಜ್ ಶರೀಫ್ ಬಂಧಿತ ಆರೋಪಿ. ಈತ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದ ಹಿಂದೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಹಲವು ಬಾರಿ ವಾರಂಟ್ ಜಾರಿ ಮಾಡಿತ್ತು. ಈತ ವಿದೇಶದಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಈತನ ವಿರುದ್ಧ ಎಲ್‌ಒಸಿ ಹೊರಡಿಸಲಾಗಿತ್ತು.

ದುಬೈಯಿಂದ ಮುಂಬೈ ಅಂ.ರಾ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾಹಿತಿ ಸಿಕ್ಕಿದ ಪ್ರಕಾರ ಎಎಸ್‌ಐ ಓಂ ದಾಸ್, ಕಾನ್‌ಸ್ಟೇಬಲ್‌ಗಳಾದ ಸುನೀಲ್ ಕುಮಾರ್, ನಿರಂಜನ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net