ಈತ 2015ರಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ ಕೊಟ್ಟಾರಿ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಕಾರ್ಯಕ್ರಮದಲ್ಲಿ ಅಶೋಕ ಕುಮಾರ ಕೊಟ್ಟಾರಿ ಹಾಗೂ ಜಗ್ಗು ಎಂಬವರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅದೇ ವಿಚಾರವಾಗಿ ಚುಂಕಿ ಆಕಾಶಭವನ ಅಲಿಯಾಸ್ ಸಂತೋಷ್ ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ ಅಲಿಯಾಸ್ ನರೇಶ್ ಮತ್ತು ಜಗ್ಗು ಜತೆ ಸೇರಿಕೊಂಡು ಅಶೋಕ ಕುಮಾರ ಕೊಟ್ಟಾರಿ ಅವರಿಗೆ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ, ಗಂಭೀರ ಗಾಯವುಂಟು ಮಾಡಿ ಕೊಲೆಯತ್ನ ನಡೆಸಿದ್ದರು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.