ನೇಜಾರು ಹತ್ಯಾ ಪ್ರಕರಣ ಆರೋಪಿ ವಿಚಾರಣೆಗೆ ಹಾಜರು

udp-20-nejaru
Published on

ಉಡುಪಿ: ನೇಜಾರಿನಲ್ಲಿ ಕಳೆದ ವರ್ಷ ನಡೆದಿದ್ದ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವಿಣ್​ ಚೌಗುಲೆಯನ್ನು ಬುಧವಾರ ಬೆಂಗಳೂರಿನ ಪರಪ್ಪನ ಕಾರಾಗೃಹದಿಂದ ಉಡುಪಿಗೆ ಕರೆತಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಿಲಾಗಿದ್ದು, ಆತನ ಪರ ವಕೀಲರು ವಕಾಲತ್ತು ವಾಪಾಸ್ಸು ಪಡೆದ ಹಿನ್ನೆಲೆಯಲ್ಲಿ ಸಾಗಳ ವಿಚಾರಣೆ ಗುರುವಾರಕ್ಕೆ ಮುಂದೂಡಲಾಗಿದೆ.

ನ್ಯಾಯಾಲಯವು ನ.20ರಂದು 1ನೇ ಸಾ ಹಾಗೂ 2ನೇ ಸಾ, ನ.21ರಂದು 3 ಹಾಗೂ 4ನೇ ಸಾಕ್ಷಿಗಳು ವಿಚಾರಣೆಗೆ ದಿನಾಂಕ ನಿಗದಿ ಪಡಿಸಿತ್ತು. ಅದರಂತೆ ಆರೋಪಿ ಪ್ರವಿಣ್​ ಚೌಗುಲೆಯನ್ನು ಬಿಗಿ ಪೊಲೀಸ್​ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್​ ವೃತ್ತನಿರೀಕ್ಷಕರ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ಆರೋಪಿ ಪರ ವಕೀಲರು, ಈ ಪ್ರಕರಣದಲ್ಲಿ ನಾನು ನ್ಯಾಯಾಲಯಕ್ಕೆ ಹಾಜರಾಗುವುದಿಲ್ಲ. ವಕಾಲತ್ತನ್ನು ವಾಪಾಸ್ಸು ಪಡೆದುಕೊಳ್ಳುತ್ತೇನೆ ಎಂದು ಕೋರ್ಟಿಗೆ ತಿಳಿಸಿದರು. ಆರೋಪಿ ಚೌಗುಲೆ ಪ್ರತಿಕ್ರಿಯಿಸಿ, ನನ್ನ ಪತ್ನಿ ಹೊಸ ವಕೀಲರನ್ನು ನೇಮಕ ಮಾಡಲಿದ್ದಾರೆ ಎಂದರು.

ಕೂಡಲೇ ವಕೀಲರನ್ನು ನೇಮಕ ಮಾಡುವಂತೆ ನ್ಯಾಯಾಧೀಶ ಎ.ಸಮೀವುಲ್ಲಾ ಆರೋಪಿಗೆ ಸೂಚಿಸಿದರು. ವಿಚಾರಣೆಗೆ ನ್ಯಾಯಾಲಯವೇ ಸಿದ್ಧವಾಗಿರುವಾಗ ಕೊನೆ ಕ್ಷಣದಲ್ಲಿ ಆರೋಪಿ ವಕೀಲರು ವಕಾಲತ್ತು ವಾಪಾಸ್ಸು ಪಡೆದಿರುವುದಕ್ಕೆ ಪ್ರಕರಣದ ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್​ ಆಳ್ವ ಆಕ್ಷೇಪ ಸಲ್ಲಿಸಿದರು. ಅನಿರೀತ ಬೆಳವಣಿಗೆಯಿಂದ ಸಾಕ್ಷಿಗಳ ವಿಚಾರಣೆ ನಡೆಯದೆ ಮುಂದಿನ ಪ್ರಕ್ರಿಯೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿರುವುದರಿಂದ ಆತನನ್ನು ಬಿಗಿ ಪೊಲೀಸ್​ ಭದ್ರತೆಯಲ್ಲಿ ಹಿರಿಯಡ್ಕ ಜೈಲಿಗೆ ಕೊಂಡೊಯ್ಯಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net