ವಿದೇಶದಲ್ಲಿ ಉದ್ಯೋಗ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಗೆ

mng--20 may Masiulla khan
Published on

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಮುಂಬಯಿಯ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ (36) ಎಂಬಾತನನ್ನು ಹೆಚ್ಚಿನ ವಿಚಾರಣೆಗೆ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ಈತ ದಕ್ಷಿಣ ಕನ್ನಡ ಜಿಲ್ಲೆಯ 185 ಸಹಿತ 300ಕ್ಕೂ ಅಧಿಕ ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1.82 ಕೋಟಿ ರೂಪಾಯಿ ಪಡೆದು ವಂಚಿಸಿದ ವಿರುದ್ಧ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸಿಸಿಬಿ ಘಟಕದಲ್ಲಿ ತನಿಖೆಯಲ್ಲಿದೆ.

ಈತನ ವಿರುದ್ದ ಈಗಾಗಲೇ ಯಾವುದೇ ಪರವಾನಗಿ ಪಡೆಯದೇ ಕಂಪೆನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024 ನೇ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಎರಡೂ ಪ್ರಕರಣಗಳು ಮಂಗಳೂರು ಪೂರ್ವ ಪೊಲೀಸ್ ಠಾಣೆಯಿಂದ ಮುಂದಿನ ತನಿಖೆಯ ಬಗ್ಗೆ ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿದೆ. ಈ ಪ್ರಕರಣದ ತನಿಖೆ ನಡೆಸುವಲ್ಲಿ ವೈಫಲ್ಯ ತೋರಿದ ಕದ್ರಿ ಠಾಣೆ ಇನ್‌ಸ್ಪೆಕ್ಟರ್ ಸೋಮಶೇಖರ್ ಹಾಗೂ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಉಮೇಶ್ ಕುಮಾರ್ ಅಮಾನತುಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net